ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಹೊರವಲಯದಲ್ಲಿ ನಡೆದಿದೆ.
ಧಾರವಾಡ-ಗೋಕಾಕ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ನಲ್ಲಿದ್ದ 6 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಯರಗಟ್ಟಿಯಿಂದ ಗೋಕಾಕ್ ಕಡೆಗೆ ಹೊರಟಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯರಗಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.