ಶನಿವಾರಸಂತೆ (ಕೊಡಗು) : ರಾಜ್ಯದಲ್ಲಿ ದಿಢೀರನೇ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಸಂತೆ ಸಮೀಪದ ಕಾಜೂರಿನಲ್ಲಿ ನಡೆದಿದೆ.
ಕಾಜೂರು ಗ್ರಾಮದ ಶಾಲೆಯೊಂದರಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಕಾರಣ ಭಯಗೊಂಡು ಮನೆಯಲ್ಲಿ ಪೋಷಕರು ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಗೋಂವಿಂದ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.