ETV Bharat / jagte-raho

ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ: ಮೂವರು ಅರೆಸ್ಟ್ - Doddaballapura IPL betting case

ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನ ಹಳ್ಳಿಯ ತೋಟದ ಮನೆಯಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Doddaballapura
Doddaballapura
author img

By

Published : Oct 1, 2020, 12:00 PM IST

ದೊಡ್ಡಬಳ್ಳಾಪುರ: ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ತೋಟದ ಮನೆಯಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಚನ್ನಕೃಷ್ಣ, ಹರೀಶ್ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 18,700 ರೂ. ಮತ್ತು ಒಂದು ಟಿವಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿಯ ತೋಟದ ಮನೆಯಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಡಿವೈಎಸ್​ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಗಜೇಂದ್ರ, ಸಿಬ್ಬಂದಿ ರಾಧಕೃಷ್ಣ, ರಮೇಶ್, ಸುರೇಶ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.