ಬಂದಾ (ಉತ್ತರ ಪ್ರದೇಶ): ಮನೆಗೆ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳೀಯರ ಸಹಾಯದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಿಬ್ಬರ ಮೃತದೇಹಗಳು ಅವಶೇಷಗಳಲ್ಲಿ ಹೂತುಹೋಗಿವೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಸರಣಿ ಅಪಘಾತ : ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.