ಹುಬ್ಬಳ್ಳಿ: ಲಾಕ್ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ನಗರದ ಎಪಿಎಂಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹನುಮಂತ ಮೇತ್ರಾಣಿ, ರವಿಂದ್ರ ಹೊನ್ಯಾಳ, ಕೃಷ್ಣ ಮೇತ್ರಾಣಿ ಬಂಧಿತ ಆರೋಪಿಗಳಾಗಿದ್ದಾರೆ. ಭೈರಿದೇವರಕೊಪ್ಪದ ಓರಿಜನಲ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 562 ಲೀಟರ್ ಮದ್ಯ ಹಾಗೂ 291 ಲೀಟರ್ ಬಿಯರ್ ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.