ಮಧ್ಯಪ್ರದೇಶ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಂಟೇನರ್ಗೆ ಡಿಕ್ಕಿ ಹೊಡದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಿಯೋನಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಹಾರ ಮತ್ತು ಜಾರ್ಖಂಡ್ ಮೂಲದ ಕಾರ್ಮಿಕರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ.