ಭಿವಾನಿ (ಹರಿಯಾಣ): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಹೊರಟ ರೈತರನ್ನು ದೆಹಲಿಗೆ ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ರೈತನೊಬ್ಬ ಮೃತಪಟ್ಟಿದ್ದಾನೆ.
ಪಂಜಾಬ್‌ನ ತನ್ನಾ ಸಿಂಗ್ ಮೃತ ರೈತ. ಹರಿಯಾಣದ ಭಿವಾನಿ ಬಳಿ ಘಟನೆ ನಡೆದಿದ್ದು, ಮೃತದೇಹವನ್ನು ರಸ್ತೆ ಮೇಲೆ ಇಟ್ಟುಕೊಂಡು ಉಳಿದ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.