ಶಿರಾಡಿ: ತುಳು ಭಾಷಾ ಚಿತ್ರನಟ ರೂಪೇಶ್ ಶೆಟ್ಟಿ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಕಲಾತ್ಮಕವಾಗಿ ಕೆತ್ತಿದ ಆನೆ ದಂತಗಳನ್ನು ಮಾರುತ್ತಿದ್ದ ಆರೋಪಿಗಳ ಬಂಧನ
ರೂಪೇಶ್ ಶೆಟ್ಟಿಯವರ ಟೊಯೋಟಾ ಫಾರ್ಚ್ಯೂನರ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರ್ಯಕ್ರಮ ನಿಮಿತ್ತ ಗೆಳೆಯರ ಜೊತೆ ರೂಪೇಶ್ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಗುಂಡ್ಯದಿಂದ ಮುಂದಕ್ಕೆ ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಗಾಯಾಳು ರೂಪೇಶ್ ಶೆಟ್ಟಿ ದಾಖಲಾಗಿದ್ದು, ಸದ್ಯದಲ್ಲೇ ಮನೆಗೆ ಮರಳಲಿದ್ದಾರೆ.