ಚಿಕ್ಕಮಗಳೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಚಿಕ್ಕಮಗಳೂರು ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಲೂರು ರೈಲ್ವೆ ನಿಲ್ದಾಣದ ಕಟ್ಟೆಯ ಬಳಿ ಇಬ್ಬರು ಆರೋಪಿಗಳಾದ ಮಜಾರ್ ಹಾಗೂ ತಬ್ರೆಜ್ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೆ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 92 ಗ್ರಾಂ ಗಾಂಜಾ ಸೊಪ್ಪು ಹಾಗೂ 8,000 ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.