ಹುಬ್ಬಳ್ಳಿ: ಅಕ್ರಮವಾಗಿ ಗೋವಾದಿಂದ ಕರ್ನಾಟಕಕ್ಕೆ ಮದ್ಯ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಗೋವಾದಿಂದ ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೇ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳ ಸಮೇತ, 18 ಲೀಟರ್ ಮದ್ಯ ಹಾಗೂ ಬುಲೆರೋ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಜೆಸಿಇ ಮತ್ತು ಡಿಸಿಇ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.