ಹುಬ್ಬಳ್ಳಿ: ಲಾಕ್ ಡೌನ್ ಸಮಯದಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಲ್ಲಿನ ನಾಗಶೆಟ್ಟಿಕೊಪ್ಪದ ಉದಯನಗರದ ನಿವಾಸಿ ಸತೀಶ ವೈ ನಿಜಾಮಕರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಉದಯನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ಮಾಡಿ, ಅಂದಾಜು 70 ಸಾವಿರ ರೂ. ಮೌಲ್ಯದ 79.100 ಲೀಟರ್ ಬಿಯರ್ ಬಾಟಲಿಗಳು, 27,780 ರೂ. ಮೌಲ್ಯದ ಎಂಎಲ್ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯನಗರದ ಕೆಂಪಣ್ಣವರ ಕಲ್ಯಾಣ ಮಂಟಪದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಶಿವಾನಂದ ಎಸ್ ಹೆರಕಲ್ ಎಂಬಾತನನ್ನು ಅಶೋಕನಗರ ಪೊಲೀಸರು ಬಂಧಿಸಿ 5,280 ರೂ. ಮೌಲ್ಯದ 38 ಬಿಯರ್ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.