ಬಸವಕಲ್ಯಾಣ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಎರಡು ಆಟೋ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ಉರ್ಕಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರದೀಪ ವಡ್ಡೆ ಎಂಬುವವರ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಮರದ ನೆರಳಿಗೆ ನಿಲ್ಲಿಸಿದ ಎರಡು ಆಟೋಗಳ ಪೈಕಿ ಒಂದು ಭಾಗಶಃ ಸುಟ್ಟು ಕರಕಲಾಗಿದೆ. ಮತ್ತೊಂದು ಸಂಪೂರ್ಣ ಬೆಂಕಿಗೆ ಸುಟ್ಟು ಹೋಗಿದೆ. ಇದರ ಪಕ್ಕದಲ್ಲೇ ಇದ್ದ ಮೇವಿನ ಬಣವೆ ಕೂಡ ಬೆಂಕಿಗೆ ಆಹುತಿಯಾಗಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಗ್ರಾಮಸ್ಥರ ಸಹಾಯದೊಂದಿಗೆ ಬೆಂಕಿ ನಂದಿಸಿದ್ದಾರೆ. 3 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.