ಉತ್ತರ ಪ್ರದೇಶ: ಇಲ್ಲಿನ ಬಹ್ರೈಚ್ ಜಿಲ್ಲೆಯ ಗ್ರಾಮವೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸ್ನೇಹಿತೆಯರಿಬ್ಬರ ಮೃತದೇಹಗಳು ಪತ್ತೆಯಾಗಿವೆ.
ಮೃತ ಬಾಲಕಿಯರು 17 ಮತ್ತು 15 ವರ್ಷದವರಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬಾಲಕಿಯರು ಒಳ್ಳೆಯ ಸ್ನೇಹಿತೆಯರಾಗಿದ್ದು, ಒಟ್ಟಿಗೆ ಮನೆಗೆಲಸ, ಕೃಷಿ ಕೆಲಸ ಮಾಡುತ್ತಿದ್ದರು. ಇವರ ಸ್ನೇಹವನ್ನು ಕುಟುಂಬಸ್ಥರು ವಿರೋಧಿಸುತ್ತಿದ್ದರು ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಹುಲ್ಲು ತರಲೆಂದು ಹೋದವರು ಮನೆಗೆ ಹಿಂದಿರುಗಿರಲಿಲ್ಲ. ಬಳಿಕ ಗ್ರಾಮದ ಹೊರಗೆ ಶವವಾಗಿ ಪತ್ತೆಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.