ಲಖನೌ (ಉತ್ತರ ಪ್ರದೇಶ): ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಸಮುದಾಯದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಉತ್ತರ ಪ್ರದೇಶದ ಚಿತ್ರಕೂಟ್ನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಅಕ್ಟೋಬರ್ 8 ರಂದು ಚಿತ್ರಕೂತ್‌ನ ಕೊಟ್ವಾಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಂಗಳವಾರ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಬುಧವಾರ ಸಂಜೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಸಂತ್ರಸ್ತೆಯ ದೂರನ್ನು ದಾಖಲಿಸಿಕೊಳ್ಳದ ಹಾಗೂ ಸಂತ್ರಸ್ತೆಯ ಪೋಷಕರು ಬಲವಾದ ಸಾಕ್ಷ್ಯಗಳನ್ನು ನೀಡಿದ್ದರೂ ಎಫ್ಐಆರ್ ನೋಂದಾಯಿಸಿಕೊಳ್ಳದ ಆರೋಪದಡಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಾರ್ವಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಜೈಶಂಕರ್ ಸಿಂಗ್ ಮತ್ತು ಸರಿಯಾ ಚೌಕಿ ಉಸ್ತುವಾರಿ ಅನಿಲ್ ಸಾಹು ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾಗಿದ್ದಾರೆ.