ನವದೆಹಲಿ: ಭಾರತಕ್ಕೆ ಅಕ್ರಮವಾಗಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಉಗಾಂಡ ಪ್ರಜೆಗಳನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಂದ ಬರೋಬ್ಬರಿ 68 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದ್ದು, ಈವರೆಗೆ ಯಾವುದೇ ಇಂಟರ್ ನ್ಯಾಷನಲ್ ಏರ್ಪೋರ್ಟ್ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಹೆರಾಯಿನ್ ಸಿಕ್ಕಿರಲಿಲ್ಲ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ತ್ರಿಶೂರ್‌ನಲ್ಲಿ 1.28 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ
ಇಬ್ಬರು ಪ್ರಯಾಣಿಕರ ಮೇಲೆ ಅನುಮಾನಗೊಂಡು ಅವರ ಬ್ಯಾಗ್ಗಳನ್ನು ತಪಾಸಣೆ ನಡೆಸಿದಾಗ 51 ಪೌಚ್ಗಳಲ್ಲಿ ಬಿಳಿ ಪುಡಿಯ ರೂಪದಲ್ಲಿ 9.8 ಕೆಜಿ ಮಾದಕವಸ್ತು ಪತ್ತೆಯಾಗಿದೆ. ಇದನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದಾಗ ಹೆರಾಯಿನ್ ಎಂಬುದು ತಿಳಿದುಬಂದಿದೆ. ಇಬ್ಬರನ್ನೂ ಬಂಧಿಸಿ, ಹೆರಾಯಿನ್ ವಶಕ್ಕೆ ಪಡೆದು ತನಿಖೆ ಮುಂದುವರೆಸಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.