ನೆಲಮಂಗಲ: ನೆಲಮಂಗಲ ಟೌನ್ ಕುಣಿಗಲ್ ವೃತ್ತದ ಬಳಿಯ ಗ್ಯಾರೇಜ್ವೊಂದರಲ್ಲಿ ಕೆಟ್ಟು ನಿಂತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ರಾತ್ರಿ ಕೊರೆವ ಚಳಿಯಿಂದ ರಕ್ಷಣೆ ಪಡೆಯಲು ಕಾರಿನಲ್ಲಿ ಕುಳಿತು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.