ಸಂಭಾಲ್(ಉತ್ತರ ಪ್ರದೇಶ) : ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಯುವಕರ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈ ವಿಡಿಯೋವನ್ನು ಒಂದು ತಿಂಗಳ ಹಿಂದೆಯೇ ಚಿತ್ರೀಕರಿಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಯುವಕರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಎಂಬಿಬಿಎಸ್ ಪದವೀಧರರಿಗೆ 10 ವರ್ಷಗಳ ಸರ್ಕಾರಿ ಸೇವೆ ಕಡ್ಡಾಯಗೊಳಿಸಿದ ಯುಪಿ ಸರ್ಕಾರ
ಕಳೆದ ವಾರ ಇಂತಹದ್ದೇ ಪ್ರಕರಣ ಮೀರತ್ನಲ್ಲಿ ನಡೆದಿತ್ತು. ಕಾರ್ಯಕ್ರಮವೊಂದರ ವೇಳೆ ಗುಂಡು ಹಾರಿಸಿ ಸಂಭ್ರಮಿಸಿದ್ದವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರ ವಿರುದ್ಧ ಕ್ರಮ ಕೈಗೊಂಡು, ಬಂದೂಕು ಪರವಾನಿಗೆ ರದ್ದುಗೊಳಿಸುವುದಾಗಿ ಸರ್ಕಲ್ ಇನ್ಸ್ಪೆಕ್ಟರ್ ಅರವಿಂದ್ ಚೌರಾಸಿಯಾ ಹೇಳಿದ್ದರು.