ETV Bharat / jagte-raho

ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ವ್ಯಕ್ತಿಯನ್ನು ಕೊಂದ ಜನ! - ಉತ್ತರ ಪ್ರದೇಶ ಕ್ರೈಂ ಸುದ್ದಿ

ಕಳ್ಳನೆಂದು ಭಾವಿಸಿ ಮದ್ಯಪಾನ ಮಾಡಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

Uttar Pradesh
ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಜನ
author img

By

Published : Sep 5, 2020, 1:29 PM IST

ಬರೇಲಿ: ಕಳ್ಳನೆಂದು ಭಾವಿಸಿದ ಜನರು ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಜನ

ಮೃತ ವ್ಯಕ್ತಿಯನ್ನು ವಾಸಿತ್​ ಅಲಿ ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಂಡ ಸೆಕ್ಯುರಿಟಿ ಗಾರ್ಡ್​ ಆತನನ್ನು ಹಿಡಿದು ಕಳ್ಳ ಕಳ್ಳ ಎಂದು ಕೂಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಿಂದು-ಮುಂದು ವಿಚಾರಿಸದೆ ವಾಸಿತ್​ ಅಲಿಯನ್ನು ಥಳಿಸಿದ್ದಾರೆ. ಬಳಿಕ ಮರಕ್ಕೆ ಕಟ್ಟಿ ಮತ್ತಷ್ಟು ಹೊಡೆದಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರನ್ನು ತಡೆದು ಗಾಯಗೊಂಡ ವಾಸಿತ್​ ಅಲಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.