ಲಖನೌ: ಮಹಿಳೆಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿನ ವಿಧಾನ ಭವನದ ಎದುರು ನಡೆದಿದೆ.
ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ವಿಧಾನ ಭವನದ ಬಳಿ ಇದ್ದ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ್ರಸ್ತೆ ಮಹಾರಾಜ್ಗಂಜ್ ಮೂಲದ 35 ವರ್ಷದ ಮಹಿಳೆಯಾಗಿದ್ದು, ಇವರು ಮೊದಲು ಅಖಿಲೇಶ್ ತಿವಾರಿ ಎಂಬವರೊಂದಿಗೆ ವಿವಾಹವಾಗಿದ್ದು, ವಿಚ್ಛೇದನ ಪಡೆದಿದ್ದರು. ಬಳಿಕ ಆಸಿಫ್ ಎಂಬವರೊಂದಿಗೆ ಮತ್ತೊಂದು ಮದುವೆಯಾಗಿ, ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು. ಕೆಲಸಕ್ಕೆಂದು ಆಸಿಫ್ ದುಬೈಗೆ ತೆರಳಿದ್ದು, ಈತನ ಕುಟುಂಬಸ್ಥರು ಮಹಿಳೆಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ.
ಈ ಸಂಬಂಧ ಮಹಾರಾಜ್ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.