ಮಥುರಾ: ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕಾಗಿ ಮಹಿಳಾ ಪೊಲೀಸ್ ಪೇದೆ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪೇದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ
20 ವರ್ಷದ ಮಹಿಳಾ ಕಾನ್ಸ್ಟೇಬಲ್ ನಿನ್ನೆ ಸಂಜೆ 4.30ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಕಳೆದ ಕೆಲ ತಿಂಗಳಿಂದ ಮದುವೆಯಾಗುವಂತೆ ಪೀಡಿಸುತ್ತಿದ್ದನು. ಆದರೆ ಅದಕ್ಕೆ ಮಹಿಳಾ ಪೊಲೀಸ್ ಪೇದೆ ತಲೆಕೆಡಿಸಿಕೊಂಡಿರಲಿಲ್ಲ. ಹೀಗಾಗಿ ರೋಸಿ ಹೋಗಿದ್ದ ಆತ ಈ ಕೃತ್ಯವೆಸಗಿದ್ದಾನೆ.
ಘಟನೆ ಹಿನ್ನೆಲೆ:
ಕಳೆದ ಕೆಲ ತಿಂಗಳಿಂದ ಪೇದೆಗೆ ಮದುವೆಯಾಗುವಂತೆ ಪೀಡಿಸಿದ್ದನು. ಆದರೆ ಇದಕ್ಕೆ ನಿರಾಕರಣೆ ಮಾಡಿದ್ದ ಅವಳು ಎಂದಿನಂತೆ ನಿನ್ನೆ ಕೂಡ ಕೆಲಸಕ್ಕೆ ಹೋಗಿದ್ದಳು. ಸಂಜೆ ಮನೆಗೆ ವಾಪಸ್ ಬರುತ್ತಿದ್ದಾಗ ವ್ಯಕ್ತಿ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ. ತಕ್ಷಣ ಆಕೆಯನ್ನ ಎಸ್ಎನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತೇಂದ್ರ ಅನಿರುದ್ಧ ತಿಳಿಸಿದ್ದಾರೆ. ಈಗಾಗಲೇ ಆರೋಪಿ ವಿರುದ್ಧ ಸೆಕ್ಷನ್ 326ಎ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.