ಬೆಂಗಳೂರು : ನಗರದ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಒಂಟಿ ವೃದ್ಧಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜಮ್ಮ (60) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಅರಿತು ಮನೆಗೆ ನುಗ್ಗಿದ ಅಪರಿಚಿತರು, ಕತ್ತಿನಲ್ಲಿದ್ದ ಚಿನ್ನದ ಆಭರಣಕ್ಕಾಗಿ ರಾಜಮ್ಮನನ್ನು ಬೆದರಿಸಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ಅವರನ್ನು ಆರೋಪಿಗಳು ರಾಡ್ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ವೃದ್ಧೆಯ ಕುಟುಂಬಸ್ಥರು ಹೇಳಿದ್ದಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.