ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೆಳಗಿನ ಮೆಟ್ಟಿಲಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಂದು ಬೆಟಗೇರಿ (32) ಆತ್ಮಹತ್ಯೆಗೆ ಶರಣಾದ ಯುವಕ. ಬೆಳಗಾವಿ ನಗರದ ಹಳೇ ಜಿಲ್ಲಾ ಪಂಚಾಯಿತಿ ಎದುರಿನ ಕಂಪೌಂಡ್ನಲ್ಲಿರುವ ರಾಯಣ್ಣ ಪುತ್ಥಳಿಯ ಆವರಣದಲ್ಲಿ ಈ ಘಟನೆ ನಡೆದಿದೆ.
ಕಳೆದ ರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೆಳಗಿನ ಮೆಟ್ಟಿಲಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.