ದಾವಣಗೆರೆ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ನಡೆದಿದೆ.
ದಾವಣಗೆರೆ ತಾಲೂಕಿನ ನಾಗರಕಟ್ಟೆಯ ಕೆ. ಚಂದ್ರನಾಯ್ಕ ಕೊಲೆಯಾದ ಯುವಕ. ಆತನ ಸ್ನೇಹಿತರೇ ಕೃತ್ಯ ಎಸಗಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿದ್ದಾರೆ.
ಚಂದ್ರನಾಯ್ಕ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಸ್ನೇಹಿತರಿಗೆ 1 ಲಕ್ಷದ 70 ಸಾವಿರ ರೂ. ಸಾಲ ನೀಡಿದ್ದನು. ಇದನ್ನು ವಾಪಸ್ ನೀಡುವಂತೆ ಕೇಳಿದ್ದ. ಹಣ ಕೊಡುವುದಾಗಿ ಹೇಳಿ ಆತನ ಸ್ನೇಹಿತರು ಕರೆದುಕೊಂಡು ಹೋಗಿ ಸೂಳೆಕೆರೆಯ ಚಾನಲ್ ಬಳಿ ಕೃತ್ಯ ಎಸಗಿದ್ದಾರೆ ಎಂದು ಬಸವ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೊಲೆಗೀಡಾದ ಯುವಕನ ಪೋಷಕರು ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.