ಭಟ್ಕಳ: ಯುವಕನೋರ್ವ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ತೀವ್ರವಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ರಾಜೇಶ ಮಾದೇವ ನಾಯ್ಕ (30) ಎಂದು ಗುರುತಿಸಲಾಗಿದೆ.
ರಾಜೇಶ ಮನೆಯ ಮಲಗುವ ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದೇಹವನ್ನು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಜಗದೀಶ್ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.