ಚೀನಾ ಮೂಲಕ ಐಕ್ಯೂ ಕಂಪನಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಚಿರಪರಿಚಿತ. ಈಗಾಗಲೇ ಹಲವಾರು ಬಗೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ.
ಇದೀಗ ತನ್ನ ಹೊಸ IQOO 9 ಮಾದರಿಯ ಗೇಮಿಂಗ್ ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಗೂ ಪರಿಚಯಿಸಲು ಉದ್ದೇಶಿಸಿದ್ದು, ಶೀಘ್ರವೇ ಭಾರತದ ಗ್ರಾಹಕರ ಕೈ ಸೇರಲಿದೆ ಎಂದು ಕಂಪನಿಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಕ್ಯೂ 9 ಹೊಸ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಶಕ್ತಿಯನ್ನು ಹೊಂದಿದೆ. 120W ಸಾಮರ್ಥ್ಯದ ಕ್ವಿಕ್ ಚಾರ್ಜರ್, ಡ್ಯುಯಲ್ ಎಕ್ಸ್-ಆಕ್ಸಿಸ್ ಲೀನಿಯರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಇದರ ಜೊತೆಗೆ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, 6.78 ಇಂಚಿನ ಫುಲ್ ಹೆಚ್‌ಡಿ+ ಸ್ಯಾಮ್‌ಸಂಗ್ E5 OLED ಡಿಸ್‌ಪ್ಲೇ ಹೊಂದಿದೆ.
ಐಕ್ಯೂ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ.
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸಲಿದೆ.
ಗೇಮಿಂಗ್ ಮಾದರಿಯ ಸ್ಮಾರ್ಟ್ಫೋನ್ಗಳು ಹೆಚ್ಚು ಬೇಡಿಕೆ ಇರುವ ಕಾರಣ ಐಕ್ಯೂ ಗೇಮಿಂಗ್ ಆಧರಿತ ಮೊಬೈಲ್ಗೆ ಒತ್ತು ನೀಡಿದೆ. ಇದರಿಂದ ಗೇಮಿಂಗ್ ಇಷ್ಟ ಪಡುವ ಯುವಕರಿಗೆ ಐಕ್ಯೂ 9 ಸ್ಮಾರ್ಟ್‌ಫೋನ್ ಹೇಳಿ ಮಾಡಿಸಿದಂತಿದೆ ಎಂದು ಕಂಪನಿ ತಿಳಿಸಿದೆ.
- 50 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ
- 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ
- 12 ಮೆಗಾಪಿಕ್ಸೆಲ್ ಸಾಮರ್ಥ್ಯದ 3ನೇ ಕ್ಯಾಮೆರಾ
- 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ
- 4,700mAh ಸಾಮರ್ಥ್ಯದ ಬ್ಯಾಟರಿ
- 120W ವೇಗದ ಚಾರ್ಜಿಂಗ್
ಇದನ್ನೂ ಓದಿ: ಮುಂಬೈ ಷೇರುಪೇಟೆಯಲ್ಲಿ ಸೆನ್ಸೆಕ್ಸ್ 600 ಅಂಕ ಕುಸಿತ: ದಿನದಂತ್ಯದ ಲಾಭ, ನಷ್ಟದ ಲೆಕ್ಕಾಚಾರ ಹೀಗಿದೆ..