ಭೋಪಾಲ್(ಮಧ್ಯಪ್ರದೇಶ) : ಮಧ್ಯಪ್ರದೇಶದಲ್ಲಿ ಹೊಸ 17 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇಂದು ಕಂಡು ಬಂದ ಎಲ್ಲಾ 17 ಪ್ರಕರಣಗಳು ಇಂದೋರ್ನಲ್ಲೇ ಪತ್ತೆಯಾಗಿದೆ ಎಂಬುದು ಅಲ್ಲಿನ ಜನರಲ್ಲಿ ಆತಂಕ ಮೂಡಿಸಿದೆ.
ಮಧ್ಯಪ್ರದೇಶದಲ್ಲಿ ಈವರೆಗೂ 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಅಲ್ಲಿನ ಸರ್ಕಾರ ಸೋಂಕು ಹರಡದಂತೆ ತಡೆಯುವ ಸಲುವಾಗಿ ತೀವ್ರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.