ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಚಾಲನೆ - LIVE

🎬 Watch Now: Feature Video

thumbnail

By ETV Bharat Karnataka Team

Published : Jan 12, 2024, 1:35 PM IST

Updated : Jan 12, 2024, 3:33 PM IST

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿರುವ 'ಯುವ ನಿಧಿ' ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಿದ್ದ ಬೃಹತ್ ವೇದಿಕೆಯಲ್ಲಿ ಮತ್ತೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಶರಣ ಪ್ರಕಾಶ್ ಪಾಟೀಲ್, ಕೆ.ಜೆ.ಜಾರ್ಜ್, ಸುಧಾಕರ್, ನಾಗೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಗಣ್ಯರು ಹಾಜರಿದ್ದಾರೆ. 1 ಲಕ್ಷ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ದಾವಣಗೆರೆ, ಚಿಕ್ಕಮಗಳೂರು, ಶಿರಸಿ, ಕಾರವಾರ ಸೇರಿದಂತೆ ಐದಾರು ಜಿಲ್ಲೆಗಳಿಂದ ಯುವಕರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ವಿಶೇಷವಾಗಿ, ಈ ಯೋಜನೆಗೆ ಅರ್ಜಿ ಹಾಕಿರುವ ನಿರುದ್ಯೋಗಿಗಳನ್ನು ಕರೆತರಲಾಗಿದೆ.

ಯುವನಿಧಿ' ಯೋಜನೆ: ಕಳೆದ ಡಿಸೆಂಬರ್​ 26ರಂದು ಸಿಎಂ 'ಯುವನಿಧಿ' ಯೋಜನೆಯ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಯೋಜನೆ ಅಡಿಯಲ್ಲಿ ಪದವಿ, ಡಿಪ್ಲೊಮಾ ಶಿಕ್ಷಣ ಪಡೆದು 6 ತಿಂಗಳಿನಿಂದ ಉದ್ಯೋಗ ದೊರೆಯದಿದ್ದರೆ, ಗರಿಷ್ಠ 2 ವರ್ಷದವರೆಗೆ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.

Last Updated : Jan 12, 2024, 3:33 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.