ETV Bharat / sitara

ಬಾಲಿವುಡ್​ ನಟ ಸುಶಾಂತ್​ ಸಿಂಗ್​​​ ರಜಪೂತ್​ ಆತ್ಮಹತ್ಯೆ..

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಪವಿತ್ರ ರಿಶ್ತಾ' ಧಾರಾವಾಹಿ ಮೂಲಕ ಕಿರುತರೆ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್​, 'ಕೈ ಪೋ ಚೆ' ಸಿನಿಮಾ ಮೂಲಕ ಬಾಲಿವುಡ್​​ ಪ್ರವೇಶಿಸಿದ್ದರು.

Sushant Singh Rajput
ಸುಶಾಂತ್​ ಸಿಂಗ್​​​ ರಜಪೂತ್
author img

By

Published : Jun 14, 2020, 3:03 PM IST

Updated : Jun 14, 2020, 4:10 PM IST

ಮುಂಬೈ: 'ಎಂ ಎಸ್​ ಧೋನಿ' ಸಿನಿಮಾದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಬಾಲಿವುಡ್​ ನಟ ಸುಶಾಂತ್​ ಸಿಂಗ್​​​ ರಜಪೂತ್ (34) ​ಮುಂಬೈನ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುಶಾಂತ್​ ನೇಣು ಬಿಗಿದ ಸ್ಥಿತಿಯಲ್ಲಿದ್ದನ್ನು ಮನೆಯ ಕೆಲಸಗಾರ ಮೊದಲು ನೋಡಿದ್ದಾನೆ.

ನಾಲ್ಕು ದಿನಗಳ ಹಿಂದೆ ಸುಶಾಂತ್​ ಅವರ ಮಾಜಿ ಮ್ಯಾನೇಜರ್​ ದಿಶಾ ಸಾಲಿಯಾನ್​ ಕೂಡ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕಳೆದ ರಾತ್ರಿ ಸುಶಾಂತ್​ನ ನಿವಾಸಕ್ಕೆ ಅವರ ಕೆಲವು ಸ್ನೇಹಿತರು ಬಂದಿದ್ದರು ಎಂದು ಹೇಳಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹವನ್ನು ಮುಂಬೈನ ಕೂಪರ್​ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಪವಿತ್ರ ರಿಶ್ತಾ' ಧಾರಾವಾಹಿ ಮೂಲಕ ಕಿರುತರೆ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್​, 'ಕೈ ಪೋ ಚೆ' ಸಿನಿಮಾ ಮೂಲಕ ಬಾಲಿವುಡ್​​ ಪ್ರವೇಶಿಸಿದ್ದರು. ಈವರೆಗೆ 12ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದೀಗ ಬಾಲಿವುಡ್​ನ ಭರವಸೆಯ ನಟನ ಸಾವಿಗೆ ಭಾರತ ಚಿತ್ರರಂಗವೇ ಕಂಬನಿ ಮಿಡಿದಿದೆ.

Last Updated : Jun 14, 2020, 4:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.