ಮುಂಬೈ: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯಾ ಬಚ್ಚನ್ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬಚ್ಚನ್ ಕುಟುಂಬದ ನಾಲ್ವರಿಗೆ ವೈರಸ್ ಅಂಟಿದಂತಾಗಿದೆ.
ನಿನ್ನೆ ರಾತ್ರಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ರ ಕೋವಿಡ್ ವರದಿ ಪಾಸಿಟಿವ್ ಬಂದಿತ್ತು. ಇಂದು ಬೆಳಗ್ಗೆ ಅಮಿತಾಬ್ರ ಪುತ್ರ ನಟ ಅಭಿಷೇಕ್ ಬಚ್ಚನ್ಗೆ ಕೂಡ ಸೋಂಕು ತಗುಲಿರುವುದು ದೃಢವಾಗಿತ್ತು.
ಇದೀಗ ಐಶ್ವರ್ಯ ರೈ ಹಾಗೂ ಅವರ ಮಗಳು ಆರಾಧ್ಯಾಳ ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದಾಗಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ಗೆ ಸೋಂಕು ದೃಢಪಟ್ಟಿರುವುದು ತಿಳಿಯುತ್ತಿದ್ದಂತೆಯೇ ಅವರು ವಾಸವಿ ನಿವಾಸ 'ಜಲ್ಸಾ' ಬಂಗಲೆಯನ್ನು ಬೃಹನ್ಮುಂಬೈ ಮಹಾನಗರ ಪಾಲಿಕೆ ಸಿಬ್ಬಂದಿ ಸೀಲ್ಡೌನ್ ಮಾಡಿ, ಸ್ಯಾನಿಟೈಸ್ ಮಾಡಿದ್ದಾರೆ.