ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರ "ರಾಮ್ ಸೇತು" ಶೂಟಿಂಗ್ ಪ್ರಾರಂಭಿಸಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಪುರಾತತ್ವಶಾಸ್ತ್ರಜ್ಞನ ಪಾತ್ರದಲ್ಲಿ ನಟಿಸಿದ್ದಾರೆ.
ಮಂಗಳವಾರದಿಂದ ರಾಮಸೇತು ಶೂಟಿಂಗ್ ಆರಂಭಿಸಿರುವ ಅಕ್ಷಯ್ ತಮ್ಮ ಫಸ್ಟ್ ಲುಕ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಅವರು ನನ್ನ ಪಾಲಿನ ಒಂದು ಹೊಸ ಸ್ಪೆಷಲ್ ಸಿನಿಮಾದ ಜರ್ನಿ ಇಂದಿನಿಂದ ಆರಂಭವಾಗಿದೆ ರಾಮ್ ಸೇತು ಶೂಟಿಂಗ್ ಆರಂಭವಾಗಿದೆ. ನಾನು ಇದರಲ್ಲಿ ಪುರಾತತ್ವಶಾಸ್ತ್ರಜ್ಞನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಕ್ಯಾಪ್ಷನ್ ಬರೆದು ಕೊಂಡಿದ್ದಾರೆ.
ಇನ್ನು ಚಿತ್ರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನುಶ್ರತ್ ಬರುಚಾ ಸಹ ನಟಿಸಿದ್ದಾರೆ. ಅಭಿಷೇಕ್ ಶರ್ಮಾ ಈ ಸಿನಿಮಾ ನಿರ್ದೇಶಿಸಿದ್ದಾರೆ. ವಿಕ್ರಮ್ ಮಲ್ಹೋತ್ರಾ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.