ETV Bharat / sitara

ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನ.. - ಬಾಲಿವುಡ್ ನಟ ಅಕ್ಷಯ್ ಕುಮಾರ್ ಸುದ್ದಿ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

akshay-kumars-mother-dies-after-illness
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ನಿಧನ
author img

By

Published : Sep 8, 2021, 10:36 AM IST

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಬುಧವಾರ ಬೆಳಗ್ಗೆ ನಿಧನರಾಗಿದ್ದು, ಈ ಕುರಿತು ಸ್ವತಃ ಅಕ್ಷಯ್ ಕುಮಾರ್ ಟ್ವಿಟರ್​ನಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ.

'ಅವಳು ನನ್ನ ಮೂಲ. ನಾನು ತುಂಬಾ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಇಂದು ಬೆಳಗ್ಗೆ ಜಗತ್ತನ್ನು ತೊರೆದಿದ್ದಾರೆ. ನನ್ನ ತಂದೆಯೊಂದಿಗೆ ಬೇರೆ ಜಗತ್ತಿನಲ್ಲಿ ಜೊತೆಯಾಗಿದ್ದಾರೆ' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

  • She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻

    — Akshay Kumar (@akshaykumar) September 8, 2021 " class="align-text-top noRightClick twitterSection" data=" ">

ಮಂಗಳವಾರ ಸಂಜೆ ತನ್ನ ತಾಯಿಯ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಕ್ಕಾಗಿ ಹಿತೈಷಿಗಳಿಗೆ ಧನ್ಯವಾದ ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದರು. ಇದಕ್ಕೂ ಮೊದಲು ಬ್ರಿಟನ್​​​ನಲ್ಲಿ ಸಿಂಡ್ರೆಲಾ ಚಿತ್ರದ ಶೂಟಿಂಗ್​​ ಅನ್ನು ಸ್ಥಗಿತಗೊಳಿಸಿ, ಭಾರತಕ್ಕೆ ಅಕ್ಷಯ್​ಕುಮಾರ್ ವಾಪಸ್​ ಆಗಿದ್ದರು.

ಮುಂಬೈನ ಹಿರಾನಂದನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅರುಣಾ ಭಾಟಿಯಾ ಚಿಕಿತ್ಸೆ ಪಡೆಯುತ್ತಿದ್ದರು. ಅರುಣಾ ಭಾಟಿಯಾ ನಿಧನಕ್ಕೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.