ETV Bharat / sitara

ಪ್ರಾಣಿಗಳ ಮೇಲಿನ ಕ್ರೌರ್ಯದ ವಿರುದ್ಧ ಧ್ವನಿ ಎತ್ತಿದ ನಟಿ ಅನುಷ್ಕಾ - ನಟಿ ಸೋನಮ್ ಕಪೂರ್​​

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ Justice For Animals ಅಭಿಯಾನ ಶುರು ಮಾಡಿದ್ದಾರೆ. ಈ ಮೂಲಕ ಬೀದಿ ನಾಯಿಗಳ ರಕ್ಷಣೆಗೆ ಕೈ ಜೋಡಿಸಿದ್ದಾರೆ.

ಚಿತ್ರಕೃಪೆ: ಇನ್​ಸ್ಟಾಗ್ರಾಂ
author img

By

Published : Aug 10, 2019, 7:51 PM IST

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕ್ರೌರ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಆಗತ್ಯ ಎಂದು ಪ್ರತಿಪಾದಿಸಿದ್ದಾರೆ.

ಇತ್ತೀಚಿಗಷ್ಟೆ ಮುಂಬೈನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ನಾಯಿ ಬಗ್ಗೆ ನಟಿ ಸೋನಮ್ ಕಪೂರ್​​ ಫೇಸ್​​ಬುಕ್​​ಲ್ಲಿ ಬರೆದುಕೊಂಡಿದ್ದರು. ಮೂಕ ಪ್ರಾಣಿಯ ಮೇಲೆ ದುಷ್ಕರ್ಮಿಗಳ ಅಟ್ಟಹಾಸದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಈ ಪೋಸ್ಟ್​​​ಗೆ ಬಾಲಿವುಡ್​ ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದರು. ಈಗ ಕ್ರಿಕೆಟಿಗ ವಿರಾಟ್ ಕೋಹ್ಲಿ ಪತ್ನಿ ಅನುಷ್ಕಾ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

'ಕೇವಲ ಲಕ್ಕಿ (ನಾಯಿಯ ಹೆಸರು) ಮಾತ್ರವಲ್ಲ ನಿತ್ಯ ಸಾವಿರಾರು ಮೂಕ ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಮ್ಮ ದೇಶಾದ್ಯಂತ ಸಾಕಷ್ಟು ಶ್ವಾನಗಳು ಮನುಷ್ಯರ ಕ್ರೌರ್ಯಕ್ಕೆ ಬಲಿಯಾಗುತ್ತಿವೆ. ಈ ಹಿನ್ನೆಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960 ಅನ್ನು ತಿದ್ದುಪಡಿ ಮಾಡಬೇಕಾಗಿದೆ. ದೌರ್ಜನ್ಯ ನಡೆಸುವರ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಇದಕ್ಕಾಗಿ ಜಸ್ಟಿಸ್​ ಫಾರ್​ ಆ್ಯನಿಮಲ್​ ಅಭಿಯಾನ ಶುರು ಮಾಡಿದ್ದಾರೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.