ಮುಂಬೈ : ಗೋರೆಗಾಂವ್ನ ಫಿಲ್ಮ್ ಸಿಟಿಯಲ್ಲಿರುವ ಹಿಂದಿ ಬಿಗ್ಬಾಸ್ ಸೆಟ್ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಸೆಟ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದ ಸ್ಥಳಕ್ಕೆ ಮುಂಬೈ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೇಗೆ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂಬುದರ ಕುರಿತೆಂತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.