ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಶೀಘ್ರದಲ್ಲೇ ವಿವಾಹವಾಗಲಿದ್ದಾರೆ! ಈ ವಿಷಯವನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ನಟಿಯಾಗಿ ನೀವು ಮುಂದಿನ ಐದು ವರ್ಷಗಳಲ್ಲಿ ತಮ್ಮನ್ನು ತಾವು ಹೇಗೆ ನೋಡಿಕೊಳ್ಳುತ್ತೀರಿ ಎಂಬ ನಿರೂಪಕರ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.
ಈ ವೇಳೆ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿರುವ ಬಾಲಿವುಡ್ ಬೆಡಗಿ, ಮದುವೆಯಾಗುವುದೂ ಸೇರಿದಂತೆ ಮುಂದಿನ ಐದು ವರ್ಷಗಳಲ್ಲಿ ನಾನು ಮಕ್ಕಳನ್ನು ಹೊಂದಲು ಬಯಸುತ್ತೇನೆ ಎಂದಿದ್ದಾರೆ. ಮದುವೆ ಬಗ್ಗೆ ಪ್ರಸ್ತಾಪದ ಮಾತು ಕಿವಿಗೆ ಬೀಳುತ್ತಿದ್ದಂತೆ ಅಭಿಮಾನಿಗಳ ಎದೆಬಡಿದ ಹೆಚ್ಚಾಗಿದೆ.
ಬಾಳ ಸಂಗಾತಿ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಬಿಟ್ಟುಕೊಡದ ಕಂಗನಾ ರಣಾವತ್ (Kangana Ranaut), ಇದೀಗ ಮನದಿಂಗಿತ ವ್ಯಕ್ತಪಡಿಸಿದ್ದು ಕುತೂಹಲ ಹೆಚ್ಚಿಸಿದ್ದಾರೆ. ಶೀಘ್ರದಲ್ಲೇ ಎಲ್ಲರಿಗೂ ತನ್ನ ಭಾವಿ ಪತಿಯ ಬಗ್ಗೆ ತಿಳಿಸಲಿದ್ದಾರೆ ಎಂದು ಬಾಲಿವುಡ್ ಮಾತನಾಡಿಕೊಳ್ಳುತ್ತಿದೆ.
ಕಂಗನಾ ರಣಾವತ್ಗೆ ಉತ್ತಮ ನಟನೆಗಾಗಿ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಪದ್ಮಶ್ರೀ (Padma Shri) ನೀಡಿ ಇತ್ತೀಚೆಗೆ ಗೌರವಿಸಲಾಗಿದೆ.