ಕೊರೊನಾ ಕಾಣಿಸಿಕೊಂಡ ಬಳಿಕ ಜನರು ಹೆಚ್ಚಾಗಿ ಒಟಿಟಿಯತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಒಟಿಟಿ ಪ್ಲಾಟ್ಫಾರ್ಮ್ಗಳ ಮಧ್ಯೆ ದೊಡ್ಡ ಮಟ್ಟದ ಕಾಂಪಿಟೇಷನ್ ನಡೆಯುತ್ತಿದೆ. ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ+ ಹಾಟ್ಸ್ಟಾರ್ ನಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಈಗ ಶಾರುಖ್ ಖಾನ್ ಕೂಡ ಇದೇ ಉದ್ಯಮದತ್ತ ಮುಖ ಮಾಡಿದ್ದಾರೆ.
ಶಾರುಖ್ ಖಾನ್ ಬಾಲಿವುಡ್ನಲ್ಲಿ ಬಹುಬೇಡಿಕೆ ನಟರಲ್ಲಿ ಒಬ್ಬರು. ಅನೇಕ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ದೊಡ್ಡ ಮಟ್ಟದ ಅಭಿಮಾನಿ ಬಳಗ ಹೊಂದಿದ್ದಾರೆ. ಇದರ ಜೊತೆಗೆ ನಿರ್ಮಾಣದಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಸ್ಟುಡಿಯೋಸ್ ಅಡಿ ಹಲವು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈಗ ಒಟಿಟಿ ಕ್ಷೇತ್ರದ ಮೇಲೂ ಕಣ್ಣಿಟ್ಟಿದ್ದಾರೆ. ಎಸ್ಆರ್ಕೆ+ (SRK+) ಹೆಸರಿನ ಒಟಿಟಿ ಪ್ಲಾಟ್ಫಾರ್ಮ್ ಲಾಂಚ್ ಮಾಡೋಕೆ ಶಾರುಖ್ ರೆಡಿ ಆಗಿದ್ದಾರೆ.
-
Kuch kuch hone wala hai, OTT ki duniya mein. pic.twitter.com/VpNmkGUUzM
— Shah Rukh Khan (@iamsrk) March 15, 2022 " class="align-text-top noRightClick twitterSection" data="
">Kuch kuch hone wala hai, OTT ki duniya mein. pic.twitter.com/VpNmkGUUzM
— Shah Rukh Khan (@iamsrk) March 15, 2022Kuch kuch hone wala hai, OTT ki duniya mein. pic.twitter.com/VpNmkGUUzM
— Shah Rukh Khan (@iamsrk) March 15, 2022
ಟ್ವಿಟರ್ನಲ್ಲಿ ಎಸ್ಆರ್ಕೆ+ ಲೋಗೋವನ್ನು ಶಾರುಖ್ ಖಾನ್ ಶೇರ್ ಮಾಡಿಕೊಂಡಿದ್ದಾರೆ. ಒಟಿಟಿ ಜಗತ್ತಿನಲ್ಲಿ ಏನೇನೋ ಆಗಲಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಕಮೆಂಟ್ ಬಾಕ್ಸ್ನಲ್ಲಿ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಈ ವಿಚಾರ ಕೇಳಿ ಕರಣ್ ಜೋಹರ್ ಸಖತ್ ಎಗ್ಸೈಟ್ ಆಗಿದ್ದಾರೆ.
ಡಿಸ್ನಿ+ ಹಾಟ್ಸ್ಟಾರ್ ಈಗಾಗಲೇ ದೊಡ್ಡ ಮಟ್ಟದ ಹೆಸರು ಮಾಡಿದೆ. ಈ ಒಟಿಟಿ ಜೊತೆ ಎಸ್ಆರ್ಕೆ+ ಕೊಲಾಬರೇಷನ್ ಮಾಡಿಕೊಳ್ಳಲಿದೆ ಎನ್ನಲಾಗಿದೆ. ಶಾರುಖ್ ಖಾನ್ ಈ ಬಗ್ಗೆ ಶೀಘ್ರವೇ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸದ್ಯ ಶಾರುಖ್ ಪಠಾಣ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಆಕ್ಷನ್ ಥ್ರಿಲ್ಲರ್ ಮಾದರಿಯ ಚಿತ್ರಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. 2023ರ ಜನವರಿ 25ರಂದು ಪಠಾಣ್ ಚಿತ್ರ ರಿಲೀಸ್ ಆಗಲಿದೆ.
ಇದನ್ನೂ ಓದಿ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರದಿಂದ ಬಾಲಿವುಡ್ ಮಾಡಿದ ಎಲ್ಲ ಪಾಪ ಕಳೆದಿದೆ: ಕಂಗನಾ ರಣಾವತ್