ETV Bharat / sitara

ಜಾವೇದ್ ಅಖ್ತರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ವರ್ಗಾವಣೆ ಕೋರಿದ್ದ ಕಂಗನಾ ಮನವಿ ತಿರಸ್ಕೃತ - ಸಾಹಿತಿ ಜಾವೇದ್ ಅಖ್ತರ್ ಕೇಸ್​

ಜಾವೇದ್ ಅಖ್ತರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವರ್ಗಾಯಿಸುವಂತೆ ಬಾಲಿವುಡ್​ ನಟಿ ಕಂಗನಾ ರಣಾವತ್​ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಮುಂಬೈನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.

Kangana Ranaut
ಕಂಗನಾ ಸಲ್ಲಿಸಿದ್ದ ಮನವಿ ತಿರಸ್ಕೃತ
author img

By

Published : Oct 21, 2021, 7:39 PM IST

ಮುಂಬೈ:ತಮ್ಮ ವಿರುದ್ಧ ಸಾಹಿತಿ ಜಾವೇದ್ ಅಖ್ತರ್ ದಾಖಲಾಸಿರುವ ಮಾನನಷ್ಟ ಮೊಕದ್ದಮೆಯನ್ನು ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ.

ಕೇಸ್​ ವಿಚಾರಣೆ ನಡೆಸುತ್ತಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇಲ್ಲ, ಈ ಹಿನ್ನೆಲೆ ಮೊಕದ್ದಮೆ ವರ್ಗಾಯಿಸುವಂತೆ ಕಳೆದ ತಿಂಗಳು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಕಂಗನಾ ರಣಾವತ್​ ವರ್ಗಾವಣೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ಕಂಗನಾ ರಣಾವತ್ ಅರ್ಜಿಯನ್ನು ತಿರಸ್ಕರಿಸಿತು.

ಏನಿದು ಕೇಸ್​:

ದೂರದರ್ಶನ ಸಂದರ್ಶನವೊಂದರಲ್ಲಿ ಕಂಗನಾ ಅವರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು, ಇದು ಅವರ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ,ಅಖ್ತರ್ (76) ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಬಾಲಿವುಡ್‌ನಲ್ಲಿ ಅಸ್ತಿತ್ವದಲ್ಲಿರುವ ಗುಂಪುಗಾರಿಕೆ('coterie')ಯನ್ನು ಉಲ್ಲೇಖಿಸುವಾಗ ರಾಣಾವತ್, ತಮ್ಮ ಹೆಸರನ್ನು ಎಳೆದು ತಂದಿದ್ದಾರೆ ಎಂದು ಜಾವೇದ್​ ಅಖ್ತರ್ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ "ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ" ಹಾಕಿದ್ದಾರೆ ಎಂದು ಆರೋಪಿಸಿ ಅಖ್ತರ್ ವಿರುದ್ಧ ಅಂಧೇರಿ ನ್ಯಾಯಾಲಯದಲ್ಲಿ ರಣಾವತ್​ ಪ್ರತಿ ದೂರು ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.