ಹೈದರಾಬಾದ್: ಕಳೆದ 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದಿದೆ. ಈ ಬಗ್ಗೆ ಸ್ವತಃ ಕಂಗನಾ ಹೇಳಿಕೊಂಡಿದ್ದಾರೆ.
ಈ ಹಿಂದೆ ಮೇ 8 ರಂದು ಕಂಗನಾಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ಹೋಂ ಕ್ವಾರಂಟೈನ್ನಲ್ಲಿದ್ದ ನಟಿ, ಈ ಸೋಂಕನ್ನು ಹೊಡೆದೋಡಿಸುವೆ ಎಂದಿದ್ದರು.
ಈ ತಿಂಗಳ ಆರಂಭದಲ್ಲಿ ಪದೇ ಪದೇ ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು. ಹೀಗಾಗಿ ನೆಗೆಟಿವ್ ವರದಿ ಬಗ್ಗೆ ಇನ್ಸ್ಟಾಗ್ರಾಂ ಮೂಲಕ ಮಾಹಿತಿ ನೀಡಿದ್ದಾರೆ.
ಕಂಗನಾ ತನ್ನ ಇನ್ಸ್ಟಾಗ್ರಾಂನಲ್ಲಿ, "ಎಲ್ಲರಿಗೂ ನಮಸ್ಕಾರ. ಇಂದು ನಾನು ಕೋವಿಡ್ ಪರೀಕ್ಷೆ ನಡೆಸಿದ್ದು, ನೆಗೆಟಿವ್ ವರದಿ ಬಂದಿದೆ. ನಾನು ವೈರಸ್ ಅನ್ನು ಹೇಗೆ ಸೋಲಿಸಿದ್ದೇನೆ ಎಂಬುದರ ಬಗ್ಗೆ ಹೇಳಲು ಬಯಸುತ್ತೇನೆ. ನಿಮ್ಮ ಪ್ರೀತಿಗೆ ಧನ್ಯವಾದಗಳು" ಎಂದಿದ್ದಾರೆ.
ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಅವುಗಳ ನಂತರದ ವಿಚಾರದ ಬಗ್ಗೆ ವಿವಾದಾತ್ಮಕ ಟ್ವೀಟ್ಗಳನ್ನು ಮಾಡಿದ್ದಕ್ಕಾಗಿ ಈ ತಿಂಗಳ ಆರಂಭದಲ್ಲಿ ಕಂಗನಾ ಅವರನ್ನು ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ನಿಷೇಧಿಸಲಾಗಿದೆ.