ಲಖನೌ (ಉತ್ತರ ಪ್ರದೇಶ): ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಮುಂಬರುವ ಪೃಥ್ವಿರಾಜ್ ಸಿನಿಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಿದಿಯೇ ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ನ್ಯಾಯಮೂರ್ತಿ ಎ.ಆರ್. ಮಸೂದಿ ಹಾಗೂ ನ್ಯಾಯಮೂರ್ತಿ ಎನ್.ಕೆ. ಜೌಹ್ರಿ ಅವರಿಂದ ಪೀಠ, ಪೃಥ್ವಿರಾಜ್ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಫೆಬ್ರವರಿ 21 ರಿಂದ ಪ್ರಕರಣದ ವಿಚಾರಣೆಗೆ ಸಮಯ ನಿಗದಿ ಮಾಡಿ ವಿಚಾರಣೆ ಮುಂದೂಡಿದೆ.
ಹಿಂದೂ ಸಾಮ್ರಾಟ ಪೃಥ್ವಿರಾಜ್ ಅವರನ್ನು ಸಿನಿಮಾದಲ್ಲಿ ತಪ್ಪಾಗಿ ಹಾಗೂ ಅಸಭ್ಯವಾಗಿ ತೋರಿಸಲಾಗಿದ್ದು, ಭಾವನೆಗಳಿಗೆ ಧಕ್ಕೆ ತರುತ್ತಿದೆ ಆರೋಪಿಸಲಾಗಿದೆ. ಚಿತ್ರದ ಬಿಡುಗಡೆ ನಿಷೇಧಿಸಬೇಕೆಂದು ಕರ್ಣಿ ಸೇನಾ ಸಂಘಟನೆಯ ಉಪಾಧ್ಯಕ್ಷೆ ಸಂಗೀತಾ ಸಿಂಗ್ ಪಿಐಎಲ್ ಸಲ್ಲಿಸಿದ್ದಾರೆ.
ಚಿತ್ರ ಬಿಡುಗಡೆಗೆ ಕರ್ಣಿ ಸೇನಾ ವಿರೋಧ ವ್ಯಕ್ತಪಡಿಸುತ್ತಿರುವುದು ಇದು ಎರಡನೇ ಬಾರಿ. 2017ರಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ವಿರುದ್ಧ ಕರ್ಣಿ ಸೇನಾ ತೀವ್ರ ಪ್ರತಿಭಟನೆ ನಡೆಸಿತ್ತು. ರಾಷ್ಟ್ರವ್ಯಾಪಿ ಪ್ರತಿಭಟನೆ ಮೂಲಕ ಸಿನಿಮಾ ಬಿಡುಗಡೆ ವಿಳಂಬಕ್ಕೆ ಕಾರಣವಾಗಿತ್ತು. ಬಳಿಕ ಪದ್ಮಾವತಿಯಿಂದ ಪದ್ಮಾವತ್ ಎಂದು ಸಿನಿಮಾ ಶೀರ್ಷಿಕೆಯನ್ನು ಬದಲಾಯಿಸಲಾಗಿತ್ತು.
ಇದನ್ನೂ ಓದಿ: ಬಹುನಿರೀಕ್ಷಿತ ಅಕ್ಷಯ್ ಕುಮಾರ್ 'ಪೃಥ್ವಿರಾಜ್' ಸಿನಿಮಾ ಟೀಸರ್ ಬಿಡುಗಡೆ