ETV Bharat / sitara

ವೈರಸ್​ ವಿರುದ್ಧ ಲತಾ ಮಂಗೇಶ್ಕರ್ ಹೋರಾಟ.. ಕೋವಿಡ್​ನಿಂದ ಗಾಯಕಿ ಗುಣಮುಖ.. - ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆ

ಲತಾ ಮಂಗೇಶ್ಕರ್ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನು ಮುಂದೆ ವೆಂಟಿಲೇಟರ್‌ನಲ್ಲಿರಿಸುವ ಅಗತ್ಯವಿಲ್ಲ. ಆಮ್ಲಜನಕವನ್ನು ಮಾತ್ರ ಒದಗಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಮಾಹಿತಿ ನೀಡಿದ್ದಾರೆ..

Lata Mangeshkar
ಲತಾ ಮಂಗೇಶ್ಕರ್
author img

By

Published : Jan 30, 2022, 7:45 PM IST

ಮುಂಬೈ (ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಅಂತಿಮವಾಗಿ ಕೋವಿಡ್​-19 ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಇಂದು ತಿಳಿಸಿದ್ದಾರೆ.

"ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಪ್ರತೀತ್ ಸಮ್ದಾನಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಅವರು ಕೋವಿಡ್​ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನುಮುಂದೆ ವೆಂಟಿಲೇಟರ್‌ನಲ್ಲಿರಿಸುವ ಅಗತ್ಯವಿಲ್ಲ. ಆಮ್ಲಜನಕವನ್ನು ಮಾತ್ರ ಒದಗಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ" ಎಂದು ರಾಜೇಶ್ ತೋಪೆ ಮಾಹಿತಿ ನೀಡಿದ್ದಾರೆ.

ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಲತಾ ದೀದಿ ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಮನೆಗೆ ಮರಳಲು ಪ್ರಾರ್ಥಿಸೋಣ. ಅವರ ಆರೋಗ್ಯದ ಕುರಿತ ಸುಳ್ಳು ಸುದ್ದಿ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಲತಾ ಮಂಗೇಶ್ಕರ್​ರ ವಕ್ತಾರರು ಈ ಹಿಂದೆಯೇ ಮನವಿ ಮಾಡಿದ್ದರು.

ಇದನ್ನೂ ಓದಿ: ಸಿನಿಮಾ ಮಂದಿರ ಭರ್ತಿಗೆ ಅವಕಾಶ ನೀಡುವಂತೆ ಸಿಎಂ ಜತೆ ಮಾತನಾಡುತ್ತೇನೆ : ನಟ ಶಿವರಾಜ್ ಕುಮಾರ್

'ಭಾರತದ ಮೆಲೋಡಿ ಕ್ವೀನ್' ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರಿಗೆ ಭಾರತ ರತ್ನ, ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಅನೇಕ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.