ETV Bharat / sitara

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ: ಕುಟುಂಬ ಮೂಲಗಳಿಂದ ಮಾಹಿತಿ - ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ನಾವು ನಿಮಗೆ ಎಲ್ಲಾ ವಿಷಯವನ್ನು ಅಪ್​ಡೇಟ್ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಲತಾ ಮಂಗೇಶ್ಕರ್
author img

By

Published : Nov 12, 2019, 1:35 PM IST

ತೀವ್ರ ಉಸಿರಾಟದ ತೊಂದರೆಯಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಲತಾ ಮಂಗೇಶ್ಕರ್​ ಅವರಿಗೆ ನಿನ್ನೆ ಬೆಳಗಿನ ಜಾವ 3 ಗಂಟೆ ವೇಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಿತ್ತು.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಲತಾ ಮಂಗೇಶ್ಕರ್​​​ ಕುಟುಂಬದ ಸದಸ್ಯರು, 'ಲತಾಜಿ ಆರೋಗ್ಯ ಈಗ ಸ್ಥಿರವಾಗಿದೆ. ನಿನ್ನೆ ಸ್ವಲ್ಪ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ ಇದೀಗ ಆ ತೊಂದರೆಯಿಂದ ಹೊರಬಂದಿದ್ದಾರೆ. ಲತಾಜಿ ಗಾಯಕಿಯಾದ್ದರಿಂದ ಸಾಮಾನ್ಯವಾಗಿ ಅವರಿಗೆ ಶ್ವಾಸಕೋಶ ಕೆಲಸ ಮಾಡುವ ಸಾಮರ್ಥ್ಯ ಕಡಿಮೆ ಆಗಿದ್ದು, ಆ ಕಾರಣದಿಂದ ಉಸಿರಾಟದ ಸಮಸ್ಯೆ ಕಂಡುಬಂದಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ನಾವು ನಿಮಗೆ ಎಲ್ಲಾ ವಿಷಯವನ್ನು ಅಪ್​ಡೇಟ್ ಮಾಡುತ್ತೇವೆ' ಎಂದು ತಿಳಿಸಿದ್ದಾರೆ.

Intro:Body:

Lata Mangeshkar stable

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.