ETV Bharat / sitara

ಸುಶಾಂತ್​ ಸಿಂಗ್​ ಆತ್ಮಹತ್ಯೆ ತನಿಖೆಗೆ ಒತ್ತಾಯಿಸಿ ಉದ್ಧವ್​ ಠಾಕ್ರೆಗೆ ಚಿರಾಗ್ ಪಾಸ್ವಾನ್ ಪತ್ರ.. - ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ತನಿಖೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ದುರಂತ ನಿಧನದ ನಂತರ, ಲೋಕ ಜನಶಕ್ತಿ ಪಕ್ಷದ (ಎಲ್ ಜೆ ಪಿ) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದಾರೆ.

LJP demands probe into Sushant Singh Rajput's death, writes to Maha CM
ಸುಶಾಂತ್​ ಸಿಂಗ್​ ಆತ್ಮಹತ್ಯೆ
author img

By

Published : Jun 22, 2020, 9:52 PM IST

ನವದೆಹಲಿ : ಜೂನ್ 14 ರಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಲೋಕ ಜನಶಕ್ತಿ ಪಕ್ಷದ (ಎಲ್​​ಜೆಪಿ) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಒತ್ತಾಯಿಸಿದ್ದಾರೆ.

ನಟನೆಯಿಂದ ರಾಜಕಾರಣಕ್ಕೆ ಬಂದ ಚಿರಾಗ್ ಪಾಸ್ವಾನ್ ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ದಿವಂಗತ ನಟ ಬಿಹಾರದ ಹೆಮ್ಮೆ ಮತ್ತು ಇಡೀ ರಾಜ್ಯವು ಅವರಿಗೆ ನ್ಯಾಯವನ್ನು ಕೋರಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬಾಲಿವುಡ್​ನಲ್ಲಿ ನಡೆಯುತ್ತಿರುವ ಪ್ರತ್ಯೇಕತಾ ಬಣ ಮತ್ತು ಸ್ವಜನಪಕ್ಷಪಾತದಿಂದಾಗಿ ಯಾವುದೇ ಪ್ರತಿಭಾವಂತ ವ್ಯಕ್ತಿ ಭವಿಷ್ಯದಲ್ಲಿ ಬಲಿಯಾಗದಂತೆ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ನಾನು ನಿಮ್ಮನ್ನು ಕೋರುತ್ತೇನೆ ಎಂದು ಒಂದು ದಿನ ಮುಂಚಿತವಾಗಿ ಠಾಕ್ರೆ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಚಿರಾಗ್ ಪಾಸ್ವಾನ್ ಮನವಿ ಮಾಡಿಕೊಂಡಿದ್ದಾರೆ.

ಸುಶಾಂತ್​ ಅವರ ರಕ್ತಸಂಬಂಧಿ ಈ ಆತ್ಮಹತ್ಯೆಯ ಹಿಂದಿನ ಪಿತೂರಿಯ ಬಗ್ಗೆ ಗಮನಸೆಳೆದಿದ್ದಾರೆ. ಅವರು ಭಾರತೀಯ ಚಲನಚಿತ್ರೋದ್ಯಮದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಣವಾದದ ಬಲಿಪಶು ಎಂದು ಅವರು ತಿಳಿಸಿದ್ದಾರೆ ಎಂದು ಎಲ್​ಜೆಪಿ ಅಧ್ಯಕ್ಷರು ಉಲ್ಲೇಖಿಸಿದ್ದಾರೆ.

ಸುಶಾಂತ್ ಸಿಂಗ್ ಅವರ ಕುಟುಂಬಕ್ಕೆ ನಾನು ಹತ್ತಿರವಾಗಿದ್ದರಿಂದ, ಅವರು ಕಠಿಣ ಪರಿಶ್ರಮಿ ಮತ್ತು ಸ್ವಚ್ಛ ಹೃದಯದ ಪ್ರತಿಭಾವಂತ ವ್ಯಕ್ತಿ ಎಂದು ನನಗೆ ಖಚಿತವಾಗಿ ತಿಳಿದಿದೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.