ನವದೆಹಲಿ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ನೀರಜ್ ಚೋಪ್ರಾ ಇತಿಹಾಸ ರಚನೆ ಮಾಡಿದ್ದು, ಅವರ ಸಾಧನೆಗೆ ಇನ್ನಿಲ್ಲದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಅಮರಾವತಿ ಕ್ಷೇತ್ರದ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅಭಿನಂದನೆ ಸಲ್ಲಿಸಿದ್ದು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್ ಚೋಪ್ರಾ ಹಾಗೂ ಅವರ ಕುಟುಂಬಕ್ಕೆ ಅಭಿನಂದನೆಗಳು. ನೀರಜ್ ಅವರ ಸಾಧನೆ ಕೋಟ್ಯಂತರ ಯುವ ಪ್ರತಿಭೆಗಳಿಗೆ ಪ್ರೇರಣೆಯಾಗಲಿದ್ದು, ಬರುವ ದಿನಗಳಲ್ಲಿ ಭಾರತದ ಅನೇಕ ಕ್ರೀಡಾಪಟುಗಳು ವಿದೇಶಕ್ಕೆ ತೆರಳಿ ಇಂತಹ ಸಾಧನೆ ಮಾಡಲಿದ್ದಾರೆ ಎಂದಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ 87.58 ಮೀಟರ್ ದೂರ ಎಸೆದು ಭಾರತಕ್ಕೆ ಈ ಸಲ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ಇದನ್ನೂ ಓದಿರಿ: ಟೋಕಿಯೋದಲ್ಲಿ ಇತಿಹಾಸ ಬರೆದ ಚೋಪ್ರಾ.. ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಮುಕುಟ
2004ರಲ್ಲಿ ನಟ ದರ್ಶನ್ ಜೊತೆ ನಟನೆ ಮಾಡಿದ್ದ ನವನೀತ್ ಕೌರ್ ರಾಣಾ, 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ದಾಖಲು ಮಾಡಿದ್ದರು. ಇವರು ಸುಮಾರು 25ಕ್ಕೂ ಹೆಚ್ಚು ತೆಲಗು, ಹಿಂದಿ, ಮಲಯಾಳಂ ಚಿತ್ರಗಳಲ್ಲಿ ನಟನೆ ಮಾಡಿದ್ದು, ಸದ್ಯ ಸಂಸದೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.