ETV Bharat / sitara

ರಿಯಾ, ಶೋವಿಕ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ - ಶೋವಿಕ್ ಚಕ್ರವರ್ತಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್​ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್ ಚಕ್ರವರ್ತಿಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂಬೈನ ಸೆಷನ್ಸ್​​ ಕೋರ್ಟ್ ನಾಳೆಗೆ ಮುಂದೂಡಿದೆ.

Rhea, Showik
ರಿಯಾ, ಶೋವಿಕ್
author img

By

Published : Sep 10, 2020, 5:25 PM IST

ಮುಂಬೈ: ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್ ಚಕ್ರವರ್ತಿಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂಬೈನ ಸೆಷನ್ಸ್​​ ಕೋರ್ಟ್ ನಾಳೆಗೆ ಮುಂದೂಡಿದೆ.

ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್​ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ಅರೆಸ್ಟ್​ ಆಗಿದ್ದ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನದಲ್ಲಿದ್ದು, ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಎನ್​ಸಿಬಿ ಕಸ್ಟಡಿಯಲ್ಲಿದ್ದಾರೆ.

ರಿಯಾ ಹಾಗೂ ಶೋವಿಕ್ ಪರವಾಗಿ ರಿಯಾ ಚಕ್ರವರ್ತಿ ಪರ ವಕೀಲ ಸತೀಶ್​ ಮಾನೆಶಿಂಧೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಿರುವ ನ್ಯಾಯಾಲಯ ನಾಳೆಗೆ ವಿಚಾರಣೆ ಮುಂದೂಡಿದ್ದು, ನಾಳೆ ಈ ಕುರಿತು ಆದೇಶ ನೀಡುವ ಸಾಧ್ಯತೆಯಿದೆ.

ಇಂದು ರಿಯಾ, ಶೋವಿಕ್​ರ ಅರ್ಜಿಗಳ ಜೊತೆಗೆ ಪ್ರಕರಣ ಸಂಬಂಧ ಬಂಧಿತರಾಗಿರುವ ದೀಪೇಶ್ ಸಾವಂತ್, ಸ್ಯಾಮ್ಯುಯೆಲ್ ಮಿರಾಂಡಾ, ಜೈದ್ ವಿಲತಾರಾ ಮತ್ತು ಬಶಿತ್ ಪರಿಹಾರ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನೂ ನಡೆಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.