ETV Bharat / sitara

ಹಿಂದಿ ವೆಬ್ ಸಿರೀಸ್​ನಲ್ಲಿ ಹೃತಿಕ್​​ಗೆ ಜೋಡಿಯಾಗಲಿದ್ದಾರೆ ಕನ್ನಡತಿ ನಭಾ ನಟೇಶ್​ - ಹಿಂದಿ ವೆಬ್ ಸಿರೀಸ್

ಸ್ಯಾಂಡಲ್​ವುಡ್​ನ 'ವಜ್ರಕಾಯ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ನಭಾ ನಟೇಶ್, ಕಡಿಮೆ ಸಮಯದಲ್ಲಿ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಯಶಸ್ಸಿನತ್ತ ಪಯಣಿಸುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಇಂಡಸ್ಟ್ರಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಭಾ, ಇದೀಗ ಬಾಲಿವುಡ್​ನತ್ತ ಮುಖ ಮಾಡಿದ್ದಾರೆ.

Naba Natesh playing major role in Hindi web Series With Hrithik
ನಭಾ ನಟೇಶ್​
author img

By

Published : Jul 31, 2021, 1:54 PM IST

ಎ. ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ 'ವಜ್ರಕಾಯ' ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟವರು ನಟಿ ನಭಾ ನಟೇಶ್. ಪಟಾಕಾ ಪಾರ್ವತಿ ಪಾತ್ರದಲ್ಲಿ ಬಿಂದಾಸ್ ಆಗಿ ನಟಿಸಿ ತಮ್ಮ ಮೊದಲ ಚಿತ್ರದಲ್ಲೇ ಕಮಾಲ್ ಮಾಡಿದ್ದವರು ನಭಾ.

'ವಜ್ರಕಾಯ' ಚಿತ್ರದ ಗೆಲುವಿನ ನಂತರ `ಲೀ’ ಚಿತ್ರದಲ್ಲಿ ನಾಯಕಿಯಾಗಿ,`ಸಾಹೇಬ’ದಲ್ಲಿ ಅತಿಥಿ ಪಾತ್ರದಲ್ಲಿ ನಭಾ ಕಾಣಿಸಿಕೊಂಡಿದ್ದರು. ನನ್ನು ದೋಚುಕುಂಡುವಟೆ’ ಚಿತ್ರದ ಮೂಲಕ ತೆಲುಗು ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಭಾ, ಅಧುಗೋ, ಇಸ್ಮಾರ್ಟ್ ಶಂಕರ್, ಡಿಸ್ಕೋ ರಾಜ, ಅಲ್ಲುಡು ಅಧುರ್ಸ್ ಸೇರಿದಂತೆ ಒಂದರ ಹಿಂದೊಂದು ತೆಲುಗು ಚಿತ್ರಗಳಲ್ಲಿ ನಟಿಸುತ್ತಲೇ ಇದ್ದಾರೆ.

Naba Natesh playing major role in Hindi web Series With Hrithik
ನಭಾ ನಟೇಶ್

ಮೆಘಾ ಸ್ಟಾರ್ ಚಿರಂಜೀವಿ ಅವರ ಸೋದರಳಿಯ ಸಾಯಿ ಧರಂ ತೇಜ್ ನಟನೆಯ 'ಸೋಲೋ ಬ್ರಾತುಕೆ ಸೋ ಬೆಟರ್' ಎನ್ನುವ ಸೂಪರ್ ಹಿಟ್ ಸಿನಿಮಾದಲ್ಲೂ ನಭಾ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ, ತೆಲುಗು ಚಿತ್ರರಂಗದ ಟಾಪ್ ನಟಿಯರಲ್ಲಿ ನಮ್ಮ ಕನ್ನಡದ ನಭಾ ನಟೇಶ್ ಕೂಡಾ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ನಭಾ ನಾಯಕಿಯಾಗಿ ನಟಿಸಿದ್ದ 'ಇಸ್ಮಾರ್ಟ್ ಶಂಕರ್' ಹತ್ತಿರತ್ತಿರ ನೂರು ಕೋಟಿ ಕಲೆಕ್ಷನ್ ಮಾಡಿತ್ತು. ಕೇವಲ ಎರಡೂವರೆ ವರ್ಷಗಳಲ್ಲಿ ನಭಾ ನಟಿಸಿದ ತೆಲುಗು ಸಿನಿಮಾಗಳ ಬಾಕ್ಸ್ ಆಫೀಸ್ ಕಲೆಕ್ಷನ್ ಬರೋಬ್ಬರಿ 250 ಕೋಟಿಗೂ ಅಧಿಕ.

ಓದಿ : ಸ್ಯಾಂಡಲ್​ವುಡ್​ನಿಂದ ಮಾಲಿವುಡ್​ಗೆ ಹಾರಿದ ಕಾವ್ಯಾ ಶೆಟ್ಟಿ : ಮೋಹನ್​ಲಾಲ್​ ಚಿತ್ರದಲ್ಲಿ ನಟನೆ

ಇಷ್ಟು ಕಡಿಮೆ ಅವಧಿಯೊಳಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ನಭಾ, ಈಗ ವೆಬ್ ಸಿರೀಸ್ ಒಂದರಲ್ಲಿ ನಟಿಸುವುದರೊಂದಿಗೆ ಬಾಲಿವುಡ್‍ನಲ್ಲೂ ಖಾತೆ ತೆರೆಯುವ ಹಂತದಲ್ಲಿದ್ದಾರೆ. ಅದೂ, ಹಿಂದಿ ಚಿತ್ರರಂಗದ ಖ್ಯಾತ ನಾಯಕ ನಟ ಹೃತಿಕ್ ರೋಷನ್ ಜೊತೆಗೆ.

ಇತ್ತೀಚೆಗೆ ಬಾಲಿವುಡ್‍ನ ಸ್ಟಾರ್ ನಟರು ವೆಬ್ ಸಿರೀಸ್​ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಸೈಫ್ ಅಲಿ ಖಾನ್ ಮುಂತಾದ ಜನಪ್ರಿಯ ನಟರ ವೆಬ್ ಸರಣಿಗಳು ತಯಾರಾಗಿವೆ. ಸದ್ಯ, ಹೃತಿಕ್ ಕೂಡಾ ಅದೇ ಹಾದಿಯಲ್ಲಿದ್ದಾರೆ. ಜಗತ್ತಿನಾದ್ಯಂತ ಹೆಸರು ಮಾಡಿರುವ `ದಿ ನೈಟ್ ಮ್ಯಾನೇಜರ್’ ವೆಬ್ ಸರಣಿಯ ಹಿಂದಿ ಅವತರಣಿಕೆಯಲ್ಲಿ ಹೃತಿಕ್ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದು, ಅದರಲ್ಲಿ ನಭಾ ನಟೇಶ್ ಹೃತಿಕ್‍ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ.

ಹೃತಿಕ್ ರೋಷನ್

ಪೂಜಾ ಹೆಗಡೆ, ರಕುಲ್ ಪ್ರೀತ್ ಸಿಂಗ್, ಪ್ರಗ್ಯಾ ಜೈಸ್ವಾಲ್, ಶಾಲಿನಿ ಪಾಂಡೆ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಸೇರಿದಂತೆ ಸಾಕಷ್ಟು ಜನ ನಟಿಯರು ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿ, ನಂತರ ಬಾಲಿವುಡ್ ಸಿನಿಮಾಗಳಲ್ಲಿ ಮಿಂಚಿದ್ದಾರೆ. ನಭಾ ನಟೇಶ್ ಕೂಡಾ ಕನ್ನಡದಿಂದ ತೆಲುಗಿಗೆ ಹೋಗಿ, ಈಗ ಅಲ್ಲಿಂದ ಹಿಂದಿ ಚಿತ್ರರಂಗಕ್ಕೆ ಅಡಿಯಿರಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.