ಮುಂಬೈ: ಲಾಕ್ಡೌನ್ ನಿಯಮಗಳನ್ನು ಮುರಿದು ಬೇಜವಾಬ್ದಾರಿತನ ತೋರಿದ ಪರಿಣಾಮ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಮರೀನ್ ಡ್ರೈವ್ ಪ್ರದೇಶದಲ್ಲಿ ತನ್ನ ಸ್ನೇಹಿತರ ಕಾರಿನಲ್ಲಿ ಸುತ್ತಾಡುತ್ತಿದ್ದುದನ್ನು ಕಂಡ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಇವರ ವಿರುದ್ಧ ಐಪಿಸಿ ಸೆಕ್ಷನ್ 269 ಮತ್ತು 188 ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯ ನಿಬಂಧನೆಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮೃತ್ಯುಂಜಯ್ ಹಿರೇಮಠ ತಿಳಿಸಿದ್ದಾರೆ.