ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ದಂಪತಿ ತಮ್ಮ ಮೊದಲ ಮಗುವನ್ನು ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದ್ದಾರೆ. ಜತೆಗೆ ಈ ಸೆಲೆಬ್ರಿಟಿ ದಂಪತಿ ಭವಿಷ್ಯದಲ್ಲಿ ಹೆಚ್ಚಿನ ಮಕ್ಕಳನ್ನು ಹೊಂದಲು ಉತ್ಸುಕರಾಗಿದ್ದಾರೆ ಎಂದು ಮೂಲವೊಂದು ಬಹಿರಂಗಪಡಿಸಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
2018ರಲ್ಲಿ ವಿವಾಹವಾದ ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಸಂಗತಿಯನ್ನು ಇನ್‌ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಿಳಿಸಿದ್ದರು. ಮೊದಲ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಹೇಳಲು ನಮಗೆ ತುಂಬಾ ಸಂತೋಷವಾಗಿದೆ. ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ ಗೌಪ್ಯತೆಯನ್ನು ಗೌರವದಿಂದ ಕಾಪಾಡಿಕೊಳ್ಳಲು ಬಯಸುತ್ತೇವೆ ಎಂದು ಪೋಸ್ಟ್ ಅನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.
ಹೆಚ್ಚಿನ ಮಕ್ಕಳನ್ನು ಹೊಂದುವ ಮಹತ್ವಾಕಾಂಕ್ಷೆಯ ಬಗ್ಗೆ ಮಾತನಾಡಿರುವ ನಟಿ ಪ್ರಿಯಾಂಕಾ ಚೋಪ್ರಾ 'ನನಗೆ ಮಕ್ಕಳೆಂದರೆ ತುಂಬಾ ಇಷ್ಟ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚು ಮಕ್ಕಳನ್ನು ಹೊಂದುವ ಯೋಜನೆ ಇದೆ' ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಮೊದಲ ಮಗು ಪಡೆದ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೊನಾಸ್ ದಂಪತಿ!