ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದಿಟ್ಟತನದಿಂದ ವಿಶಿಷ್ಟ ಪಾತ್ರ ವಹಿಸಿರುವ ಎಲ್ಲಾ ಮಹಿಳೆಯರಿಗೆ ನಟಿ ಪ್ರಿಯಾಂಕಾ ಚೋಪ್ರಾ ಗೌರವ ಸಲ್ಲಿಸಿದ್ದಾರೆ.
ರಾಷ್ಟ್ರವು ತನ್ನ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಿಯಾಂಕಾ ಚೋಪ್ರಾ ದೇಶದ ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದ ಮಹಿಳಾ ಹೋರಾಟಗಾರರನ್ನು ಸ್ಮರಿಸಿದ್ದಾರೆ.
- " class="align-text-top noRightClick twitterSection" data="
">
ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕಾ, ಅಮೃತ್ ಕೌರ್, ಅರುಣಾ ಅಸಫ್ ಅಲಿ, ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್, ದುರ್ಗಾವತಿ ದೇವಿ, ಕಮಲಾ ನೆಹರು, ಕನಕಲತಾ ಬರುವಾ, ಕಸ್ತೂರ್ಬಾ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಸರೋಜಿನಿ ನಾಯ್ಡು, ಸುಚೇತಾ ಕೃಪಲಾನಿ, ಉದಾ ದೇವಿ ಮೊದಲಾದವರಿಗೆ ಗೌರವ ಸಲ್ಲಿಸಿದ್ದಾರೆ.
"ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅಸಂಖ್ಯಾತ ಪ್ರಬಲ ಮತ್ತು ಧೈರ್ಯವಂತ ಮಹಿಳೆಯರು ಭಾಗವಹಿಸಿದ್ದರು. ಪ್ರತಿಯೊಬ್ಬರೂ ಹೋರಾಟದಲ್ಲಿ ವಿಶಿಷ್ಟ ಪಾತ್ರ ವಹಿಸಿದ್ದಾರೆ. ಅವರು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ"ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.