ಲಾಸ್ ಏಂಜಲೀಸ್: ಪಾಪ್ ಗಾಯಕ ಹಾಗೂ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಪತಿ ನಿಕ್ ಜೋನಸ್ ಕಾರ್ಯಕ್ರಮವೊಂದರ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್‌ಬಿಸಿ ಗಾಯನ ಸ್ಪರ್ಧೆಯ ಸಿರೀಸ್ ಹಿನ್ನೆಲೆ ಸೆಟ್ನಲ್ಲಿ ಶೂಟಿಂಗ್ನಲ್ಲಿದ್ದ ವೇಳೆ ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಈ ಕುರಿತು ನಿಕ್ ಪ್ರತಿಕ್ರಿಯಿಸಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ, ನಾನು ಆರಾಮಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ ಪ್ರಿಯಾಂಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಏನೂ ಹೇಳಿಕೊಂಡಿಲ್ಲ.
ಇದಕ್ಕೂ ಮೊದಲು, 2018 ರಲ್ಲಿ ಮೆಕ್ಸಿಕೋದಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಾಕ್ಟೀಸ್ ನಡೆಸುವಾಗ ಸಹ 28 ರ ಹರೆಯದ ಖ್ಯಾತ ಗಾಯಕ ನಿಕ್ ಕೈಗೆ ಪೆಟ್ಟಾಗಿತ್ತು.