ETV Bharat / sitara

'ಪ್ರೇಮಿಗಳ ದಿನ'ದ ಸಂದರ್ಭದಲ್ಲೇ ರಾಖಿ ಸಾವಂತ್ ದಾಂಪತ್ಯ ಅಂತ್ಯ - ರಾಖಿ ಸಾವಂತ್ ಹೇಳಿಕೆ

ಗಂಡನ ಜೊತೆಗಿನ ಸಂಬಂಧವನ್ನು ಸಂಪೂರ್ಣವಾಗಿ ಕಡಿದುಕೊಳ್ಳಲು ರಾಖಿ ಸಾವಂತ್​ ನಿರ್ಧರಿಸಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಅವರು ತಿಳಿಸಿದ್ದಾರೆ.

Rakhi Sawant
ರಾಖಿ ಸಾವಂತ್
author img

By

Published : Feb 14, 2022, 2:19 PM IST

ಬಾಲಿವುಡ್​​ ನಟಿ ರಾಖಿ ಸಾವಂತ್​ ಅವರು ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಪತಿ ರಿತೇಶ್ ಅವರಿಂದ ತಾವು ಬೇರ್ಪಟ್ಟಿರುವ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.‌ ವ್ಯಾಲೆಂಟೈನ್ ಡೇ ಆಚರಣೆಗೂ ಒಂದು ದಿನ ಮುನ್ನ (ಫೆ.13ರಂದು) ರಾಖಿ ಗಂಡನಿಂದ ಬೇರೆ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೇವಲ ಬಿಗ್‌ಬಾಸ್‌ನಲ್ಲಿ ಟಿಆರ್‌ಪಿ ಗಿಟ್ಟಿಸುವ ಸಲುವಾಗಿ ರಾಖಿ ಸಾವಂತ್ ಅವರು ಮದುವೆ ಆಗಿದ್ರಾ? ಎಂಬ ಪ್ರಶ್ನೆ ಈಗ ಮೂಡಿದೆ‌.‌ 'ಬಿಗ್ ಬಾಸ್ 15'ರಲ್ಲಿ ವೈಲ್ಡ್​ ಕಾರ್ಡ್ ಎಂಟ್ರಿ ಮೂಲಕ ರಾಖಿ ಸಾವಂತ್ ಮತ್ತು ಅವರ ಪತಿ ರಿತೇಶ್ ಭಾಗವಹಿಸಿದ್ದರು. ಆದರೆ ಆ ಶೋ ಅಂತ್ಯವಾದ ಬಳಿಕ ಅವರಿಬ್ಬರೂ ನಾನೊಂದು ತೀರ ನೀನೊಂದು ತೀರ ಎಂಬಂತಾದರು. ಆ ಬಳಿಕ, ಸದ್ಯಕ್ಕೆ ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಈಗ ಸಂಪೂರ್ಣವಾಗಿ ಗಂಡನ ಜತೆಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದಾರೆ.

ವ್ಯಾಲೆಂಟೈನ್ಸ್​ ಡೇ ದಿನಕ್ಕೂ ಮುನ್ನವೇ ಈ ರೀತಿ ಆಗಿದ್ದರ ಬಗ್ಗೆ ನನಗೆ ತೀವ್ರ ಬೇಸರವಿದೆ. ಆದರೆ ಇಂಥ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಿತ್ತು. ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿದೆವು. ಆದರೆ ನಾವು ದೂರವಾಗುವುದೇ ಉತ್ತಮ ಎನಿಸಿತು. ನನ್ನ ಆರೋಗ್ಯ ಮತ್ತು ವೃತ್ತಿಜೀವನದ ಬಗ್ಗೆ ನಾನು ಗಮನ ಹರಿಸಬೇಕು. ರಿತೇಶ್​ಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ರಾಖಿ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಸಾಲ ಹಿಂದಿರುಗಿಸದ ಆರೋಪ: ಶಿಲ್ಪಾ ಶೆಟ್ಟಿ, ತಾಯಿ, ತಂಗಿಗೆ ಕೋರ್ಟ್ ಸಮನ್ಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.