ಮುಂಬೈ : ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸಹಾಯ ಮಾಡಿದ ಸೋನು ಸೂದ್ ಹಾಗೂ ಸಲ್ಮಾನ್ಖಾನ್ರನ್ನು ಭಾರತದ ಪ್ರಧಾನಮಂತ್ರಿಯಾಗಿ ನೋಡಬೇಕೆಂದು ನಟಿ ರಾಖಿ ಸಾವಂತ್ ಹೇಳಿದ್ದಾರೆ.
ಕೊರೊನಾ ಮೊದಲ ಅಲೆ ಕಾಣಿಸಿಕೊಂಡ ದಿನದಿಂದ ಬಡವರ ಪಾಲಿಗೆ ನಟ ಸೋನು ಸೂದ್ ಅಕ್ಷರಶಃ ದೇವರ ಪ್ರತಿರೂಪವಾಗಿ ಕಾಣುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ವಲಸಿಗರು ಊರು ಸೇರಲು ವಾಹನಗಳ ವ್ಯವಸ್ಥೆ ಸೇರಿದಂತೆ, ಅನೇಕರು ಬದುಕು ಕಟ್ಟಿಕೊಳ್ಳಲು ಇವರು ನೆರವಾಗಿದ್ದಾರೆ.
ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲೂ ಅನೇಕ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಸೋನುಸೂದ್ ಮಾತ್ರವಲ್ಲದೇ, ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸೇರಿ ಅನೇಕರು ಕೊರೊನಾ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ನಿಂತಿದ್ದಾರೆ.
ಇದನ್ನೂ ಓದಿ: ಲಾಠಿ ಏಟು ತಪ್ಪಿಸಿಕೊಳ್ಳಲು ಸೈಕಲ್ ಸವಾರನ ಸೂಪರ್ ಐಡಿಯಾ..! ವಿಡಿಯೋ ವೈರಲ್